ಮಂಡ್ಯ ಜಿಲ್ಲೆಯ ಶಾಸಕರಿಂದ ಸಿಎಂಗೆ ಅಭಿನಂದನೆ
ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ರೂ. 52 ಕೋಟಿ ಮನ್ನಾ
ಬೆಂಗಳೂರು: ಮಂಡ್ಯ ಜಿಲ್ಲೆಯ ಶಾಸಕರು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.
ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕ ನೆ.ಲ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಉದಯಗೌಡ, ರವಿಶಂಕರ್, ಹರೀಶ್ ಗೌಡ, ದಿನೇಶ ಗೂಳಿಗೌಡ, ಮಧು ಜಿ. ಮಾದೇಗೌಡ, ಮೈಷುಗರ್ ಅಧ್ಯಕ್ಷರಾದ ಗಂಗಾಧರ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.