For the best experience, open
https://m.samyuktakarnataka.in
on your mobile browser.

ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ: ಮಧು ಬಂಗಾರಪ್ಪ

07:47 PM Sep 25, 2024 IST | Samyukta Karnataka
ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ  ಮಧು ಬಂಗಾರಪ್ಪ

ಯಾದಗಿರಿ: ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಅಕ್ಷರ ದಾಸೋಹ-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜೀ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಯಾದಗಿರಿ ತಾಲೂಕಿನ ಅರಿಕೇರಾ ಕೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಕೊಡ್ತಾ ಬಂದಿದ್ದೇವೆ. ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 76 ಸಾವಿರ ಶಾಲೆಗಳು ಬರುತ್ತವೆ. ಒಟ್ಟು 60 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡ್ತಾ ಇದ್ದಾರೆ. ಇಂದು ವಾರದಲ್ಲಿ 6 ದಿನ ಮೊಟ್ಟೆ ವಿತರಿಸಲು ಚಾಲನೆ ನೀಡಲಾಗಿದ್ದು, ರಾಜ್ಯದ 57 ಲಕ್ಷ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಅಜೀಂ ಪ್ರೇಮ್ ಜಿ ಫೌಂಡೇಶನ್‌ರವರು ಕೈ ಜೋಡಿಸಿದ್ದಾರೆ ಎಂದರು.
ಸರಕಾರವು ಮಕ್ಕಳ ಪೌಷ್ಟಿಕತೆಗೆ ಹೆಚ್ಚು ಒತ್ತು ಕೊಡುತ್ತಿದ್ದು, ಈ ಯೋಜನೆಗೆ ಮೂರು ವರ್ಷಕ್ಕೆ 1,591 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕ ಮಾಡುವ ಉದ್ದೇಶ ಇದೆ ಎಂದರು.

Tags :