ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಕ್ಕಳ ಬೇಡಿಕೆ ಈಡೇರಿಸಲು ಸದಾ ಸಿದ್ದಳಿದ್ದೇನೆ

01:43 PM Nov 29, 2023 IST | Samyukta Karnataka

ಬೆಳಗಾವಿ: ತಾಯಿಯ ಸ್ಥಾನದಲ್ಲಿ‌ ನಿಂತು‌ ಈ ಮಕ್ಕಳ ಬೇಡಿಕೆಗಳನ್ನು ಈಡೇರಿಸಲು ಕ್ರಮ ತೆಗುದುಕೊಳ್ಳಲು ಸದಾ ಸಿದ್ದಳಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರ ಕ್ರೀಡಾಕೂಟ ಉದ್ಘಾಟಿಸಿರುವ ಅವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಾಕಿ ಪೋಸ್ಟ್‌ ಮಾಡಿದ್ದಾರೆ, ವಿಕಲಚೇತನ ಮಕ್ಕಳೆಂದರೆ ದೇವರ ಮಕ್ಕಳು, ಕರುಣಾಮಯಿಗಳು, ಅವರ ಉಜ್ವಲ ಭವಿಷ್ಯಕ್ಕೆ ಸರ್ಕಾರ ಕಂಕಣಬದ್ಧವಾಗಿ ನಿಂತಿದೆ. ತಾಯಿಯ ಸ್ಥಾನದಲ್ಲಿ‌ ನಿಂತು‌ ಈ ಮಕ್ಕಳ ಬೇಡಿಕೆಗಳನ್ನು ಈಡೇರಿಸಲು ಕ್ರಮ ತೆಗುದುಕೊಳ್ಳಲು ಸದಾ ಸಿದ್ದಳಿದ್ದೇನೆ.

ವಿಕಲಚೇತನರು ಯಾವುದೇ ವಿಷಯದಲ್ಲಿ ಹಿಂದೆ ಉಳಿಯಬಾರದೆನ್ನುವ ಉದ್ದೇಶದಿಂದ ಇಲಾಖೆ ನಿರಂತರ ಕೆಲಸ ಮಾಡುತ್ತಿದೆ. ಇಲಾಖೆಯಿಂದ ಎಲ್ಲ ಸೌಲಭ್ಯವನ್ನು ಒದಗಿಸಲಾಗುವುದು. ವಿಕಲಚೇತನರಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಣೆಗಳು 24 ಗಂಟೆಗಳಲ್ಲಿ ಕ್ಲಿಯರ್ ಆಗಬೇಕೆಂದು ಸೂಚನೆಯನ್ನು‌ ನೀಡಿದ್ದೇನೆ‌. ಈ ವಿಶೇಷ ಮಕ್ಕಳ ಭವಿಷ್ಯದ ಸಲುವಾಗಿ ಕೆಲಸ ಮಾಡುತ್ತಿರುವ ಎಲ್ಲ ಶಿಕ್ಷಕರಿಗೆ ಈ ಸಮಯದಲ್ಲಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಮಯದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ, ಮಹಿಳಾ ಮತ್ತು‌‌ ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ನಾಮದೇವ ಬಿಳ್ಕರ್, ಯುವರಾಜ ಕದಂ, ಶಂಕರಗೌಡ ಪಾಟೀಲ, ವಿಶೇಷ ಚೇತನ ಶಾಲೆಗಳ ಸಿಬ್ಬಂದಿ ಹಾಗೂ ಮಕ್ಕಳು‌ ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

Next Article