For the best experience, open
https://m.samyuktakarnataka.in
on your mobile browser.

ಮಗು ಕೊಂದು ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಮಹಿಳಾ ಉದ್ಯಮಿಯ ಬಂಧನ

11:42 AM Jan 09, 2024 IST | Samyukta Karnataka
ಮಗು ಕೊಂದು ಸೂಟ್ ಕೇಸ್​ನಲ್ಲಿ ಶವ ರವಾನಿಸುತ್ತಿದ್ದ ಮಹಿಳಾ ಉದ್ಯಮಿಯ ಬಂಧನ

ಚಿತ್ರದುರ್ಗ : ಗೋವಾದ ಹೋಟೆಲ್ ಒಂದರಲ್ಲಿ ತನ್ನ ಮಗುವನ್ನ ಕೊಂದು ಸೂಟ್ಕೇಸ್‌ನಲ್ಲಿ ಶವ ಕೊಂಡೊಯ್ಯುತ್ತಿದ್ದ ಸ್ಪಾಟ್ ಆಫ್ ಫೌಂಡರ್ ಸಿಇಓ ಸೂಚನಾ ಸೇಠ್ ಅವರನ್ನು ಐಮಂಗಲ ಪೊಲೀಸರು ಬಂಧಿಸಿದ್ದಾರೆ.
ಸುಚಾನಾ ಸೇಠ್ ಗೋವಾದ ಹೋಟೆಲ್ ನಲ್ಲಿ ನಾಲ್ಕು ವರ್ಷದ ಗಂಡು ಮಗುವನ್ನು ಹತ್ಯೆ ಮಾಡಿ, ಸೂಟ್ಕೇಸ್‌ನಲ್ಲಿ ಮಗುವಿನ ಶವದೊಂದಿಗೆ ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸರು ತಾಯಿಯನ್ನು ಬಂಧಿಸಿದ್ದಾರೆ. ಆರೋಪಿಯು ಗೋವಾದಿಂದ ಟ್ಯಾಕ್ಸಿ ಮಾಡಿಕೊಂಡು ತೆರಳಿದ್ದಾರೆ.
ಹೋಟೆಲ್‌ನವರಿಗೆ ಅನುಮಾನ: ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್​ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದರಿಂದ ಗೋವಾದಲ್ಲಿ ತಂಗಿದ್ದ ಹೋಟೆಲ್ ನವರಿಗೆ ಅನುಮಾನ ಬಂದ ಹಿನ್ನಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋವಾ ಪೊಲೀಸ್‌ಗೆ ಮಾಹಿತಿ ಸಿಕ್ಕ ಬಳಿಕ ಟ್ಯಾಕ್ಸಿ ಡ್ರೈವರ್‌ನನ್ನು ಸಂಪರ್ಕ ಮಾಡಿ ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಟ್ಯಾಕ್ಸಿ ಡ್ರೈವರ್ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಇದಾದ ನಂತರ ಚಾಲಕ ಆರೋಪಿಯನ್ನು ಐಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ.ಕಾರ್‌ನ ಡಿಕ್ಕಿಯಲ್ಲಿದ್ದ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವ ಮಾರ್ಚರಿಗೆ ಶಿಫ್ಟ್ ಮಾಡಿ ಆರೋಪಿ ಸುಚನಾ ವಶಕ್ಕೆ ಪಡೆದುಕೊಂಡಿದ್ದಾರೆ. ಗೋವಾ ಪೊಲೀಸರಿಗೆ ಆರೋಪಿ ಒಪ್ಪಿಸಲು ಐಮಂಗಲ ಪೊಲೀಸರು ಕಾದಿದ್ದಾರೆ. ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪಿಎಚ್ಡಿ ವಿದ್ಯಾರ್ಥಿನಿ: ಆರೋಪಿಯು ಕೊಲ್ಕತ್ತಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಪಿಎಚ್ಡಿ ವಿದ್ಯಾಬ್ಯಾಸ ಮಾಡುತಿದ್ದಾಳೆ. ಈಕೆ ಗಂಡನೊಂದಿಗೆ ವಿವಾಹ ವಿಚ್ಛೇದನ ಪಡೆದುಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದಳು. ಈಕೆಯ ಪತಿ ಇಂಡೋನೇಷ್ಯಾದಲ್ಲಿ ಇದ್ದಾರಂತೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯು ಗೋವಾ ಪ್ರವಾಸ ಕೈಗೊಂಡಾಗ ಈ ಘಟನೆ ನಡೆದಿದೆ.