ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಡಿಕೇರಿ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

08:57 PM Oct 31, 2023 IST | Samyukta Karnataka

ಮಡಿಕೇರಿ: ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ನಡೆದ ಭೀಕರ ದುರಂತದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ ಪೈಕಿ ಈಗ ಇಬ್ಬರ ಶವ ಹೊರತೆಗೆದಿದ್ದು, ಇನ್ನೊಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಮಣ್ಣಿನ ಅಡಿ ಸಿಲುಕಿದವರನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸಪ್ಪ, ನಿಂಗಪ್ಪ & ಆನಂದ್ ಎಂದು ಗುರುತಿಸಲಾಗಿದೆ. ಖಾಸಗಿ ಜಾಗದಲ್ಲಿ, ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಮಣ್ಣು ಕುಸಿದಿದೆ ಎನ್ನಲಾಗಿದೆ. ಘಟನೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಯುಕ್ತ ಕರ್ನಾಟಕ ವಿಶೇಷ ಪುರವಣಿ ಸಿರಿನಾಡು ಲೋಕಾರ್ಪಣೆ

Next Article