ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಣ್ಣಿನ ಮಕ್ಕಳ ಹೋರಾಟ ನಿಲ್ಲದು…

01:16 PM Feb 12, 2024 IST | Samyukta Karnataka

ಬೆಂಗಳೂರು: ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ದೆಹಲಿಯ ಜಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ಪಷ್ಟವಾಗಿದೆ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಸರ್ಕಾರ ತಕ್ಷಣ ರೈತರ ಬೇಡಿಕೆಗಳನ್ನು ಉದ್ದೇಶಿಸಿ ಸಮಸ್ಯೆ ಬಗೆಹರಿಸಬೇಕೆ ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ. ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ದೆಹಲಿ ಸರ್ಕಾರ ಮತ್ತು ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದಿದ್ದಾರೆ.

Next Article