For the best experience, open
https://m.samyuktakarnataka.in
on your mobile browser.

ಮತದಾನ ಮಾಡಿದ ಬೊಮ್ಮಾಯಿ

10:22 AM Nov 13, 2024 IST | Samyukta Karnataka
ಮತದಾನ ಮಾಡಿದ ಬೊಮ್ಮಾಯಿ

ಹಾವೇರಿ(ಶಿಗ್ಗಾವಿ): ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಬುಧವಾರ ಬೆಳಗ್ಗಿನಿಂದ ತುರುಸಿನ ಮತದಾನ ನಡೆಯುತ್ತಿದೆ.
ಮತದಾರರು ಮತಗಟ್ಟೆಗಳತ್ತ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮತದಾನಕ್ಕೂ ಮುನ್ನ ಮತಗಟ್ಟೆ ಸಿಬ್ಬಂದಿಯಿಂದ ಅಣಕು ಮತದಾನ ನಡೆಯಿತು. ಮತಯಂತ್ರಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಲಾಯಿತು. ಮತಯಂತ್ರಗಳು ಸರಿ ಇವೆ ಎಂದು ಖಚಿತಪಡಿಸಿಕೊಂಡ ನಂತರವೇ ಸಿಬ್ಬಂದಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಮಾಡಿಕೊಂಡಿದೆ. ಮತಗಟ್ಟೆಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಶಿಗ್ಗಾವಿ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್​ನಿಂದ ಯಾಸೀರ್ ಖಾನ್ ಪಠಾಣ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ- 2,37,525. ಈ ಪೈಕಿ 1,21,443 ಪುರುಷರು ಮತ್ತು 1,16,076 ಮಹಿಳೆಯರು ಹಾಗೂ ಇತರ 6 ಮತದಾರರಿದ್ದಾರೆ. ಒಟ್ಟು 241 ಮತಗಟ್ಟೆಗಳಿದ್ದು, 92 ಸೂಕ್ಷ್ಮ ಮತ್ತು 141 ಸಾಮಾನ್ಯ ಮತಟ್ಟೆಗಳಿವೆ.

ಶಿಗ್ಗಾವಿ-ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-1 ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

Tags :