ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿ

12:08 PM Apr 11, 2024 IST | Samyukta Karnataka

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಮತದಾರರ ಮೇಲಿನ ಕೋಪಕ್ಕೆ ಡಿಕೆ ಸಹೋದರರ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರ್ ಅಶೋಕ ಕಿಡಿಕಾರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ ಕೆ ಶಿವಕುಮಾರ ಹಾಗೂ ಅವರ ಸಹೋದರ ಡಿ ಕೆ ಸುರೇಶ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ.

ಬಿಜೆಪಿ ಕಾರ್ಯಕರ್ತ‌ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.

Next Article