ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮತದಾರರ ವಿಶ್ವಾಸ ಗಳಿಸಲು ಕಾರ್ಯಕರ್ತರಿಗೆ ಮೋದಿ ಕರೆ

01:45 AM Feb 19, 2024 IST | Samyukta Karnataka

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಮುಂದಿನ ೧೦೦ ದಿನಗಳು ಮಹತ್ವದ್ದಾಗಿದ್ದು, ಕಾರ್ಯಕರ್ತರು ಪ್ರತಿಯೊಬ್ಬ ಹೊಸ ಮತದಾರನನ್ನು, ಫಲಾನುಭವಿಯನ್ನು, ಪ್ರತಿಯೊಂದು ಸಮುದಾಯವನ್ನು ಸಂಪರ್ಕಿಸಿ, ಅವರ ವಿಶ್ವಾಸ ಗಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಮೋದಿ, ದೇಶವನ್ನು ವಿಕಸಿತ ಭಾರತವನ್ನಾಗಿ ಮಾಡಲು ಮುಂದಿನ ೫ ವರ್ಷಗಳ ಕಾಲಘಟ್ಟ ನಿರ್ಣಾಯಕವಾಗಿದೆ. ಅದಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ಮತ್ತೆ ತರಬೇಕಾಗಿರುವುದು ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟರು. ಒಮ್ಮೆ ಹಿರಿಯ ನಾಯಕರೊಬ್ಬರು, ನೀವು ಪ್ರಧಾನಿ ಮತ್ತು ಸಿಎಂ ಆಗಿ ಸಾಕಷ್ಟು ಕೆಲಸ ಮಾಡಿದ್ದೀರಿ. ಇನ್ನು ಪಡೆದುಕೊಳ್ಳಿ ಎಂದು ನನಗೆ ಹೇಳಿದ್ದರು. ಆದರೆ ನಾನು ರಾಷ್ಟçನೀತಿಗಾಗಿ ಕೆಲಸ ಮಾಡುತ್ತಿದ್ದೇನೆ, ರಾಜನೀತಿಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕೋಟಿಗಟ್ಟಲೆ ಮಹಿಳೆಯರು, ಬಡವರು, ಯುವಕರ ಕನಸೇ ಮೋದಿಯ ಕನಸಾಗಿದೆ ಎಂದರು. ಬರುವ ದಿನಗಳಲ್ಲಿ ತಾಯಂದಿರು, ಸೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಬೇಕಾದಷ್ಟು ಅವಕಾಶಗಳು ದೊರೆಯಲಿವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ದೇಶವನ್ನು ಬೃಹತ್ ಹಗರಣಗಳು ಮತ್ತು ಭಯೋತ್ಪಾದಕ ದಾಳಿಗಳಿಂದ ಮುಕ್ತಗೊಳಿಸಿದ್ದು, ಬಡ ಮತ್ತು ಮಧ್ಯಮ ವರ್ಗದವರ ಜೀವನ ಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿದ್ದೇವೆ. ೧೦ ವರ್ಷಗಳ ನಿಷ್ಕಳಂಕ ಆಡಳಿತ ಮತ್ತು ೨೫ ಕೋಟಿ ಜನರನ್ನು ಬಡತನದಿಂದ ಹೊರತಂದಿರುವುದು ಸಾಮಾನ್ಯ ಸಾಧನೆಯಲ್ಲ. ತಾವು ಮೂರನೇ ಅವಧಿಗೆ ಅಧಿಕಾರವನ್ನು ಅನುಭವಿಸಲು ಬಯಸುತ್ತಿಲ್ಲ, ಆದರೆ ದೇಶಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವುದಾಗಿ ಹೇಳಿದರು.
ಕಳೆದ ೧೦ ವರ್ಷಗಳಲ್ಲಿ ಅನೇಕ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡಿದ್ದೇವೆ. ದಶಕಗಳ ಕಾಲದಿಂದ ಉಳಿದಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ರಾಮ ಮಂದಿರ ನಿರ್ಮಿಸಲು ಐದು ಶತಮಾನದ ಕಾಯುವಿಕೆ ಅಂತ್ಯಗೊಂಡಿದೆ. ಏಳು ದಶಕಗಳ ನಂತರ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಯಾಗಿದೆ, ೩೭೦ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಸೈನಿಕರ ದಶಕಗಳ ಬೇಡಿಕೆಯಾಗಿದ್ದ ಒನ್ ರ‍್ಯಾಂಕ್ ಒನ್ ಪೆನ್ಶನ್ ಜಾರಿಗೆ ತರಲಾಗಿದೆ. ಮಹಿಳಾ ಮೀಸಲಾತಿ, ಹೊಸ ಶೈಕ್ಷಣಿಕ ಪದ್ಧತಿ ಜಾರಿಗೆ ತರಲಾಗಿದೆ, ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿದ್ದೇವೆ ಎಂದು ತಮ್ಮ ಸಾಧನೆಗಳ ಪಟ್ಟಿ ಮಾಡಿದರು.
ಸಮಾವೇಶದಲ್ಲಿ ಎಲ್ಲ ಕೇಂದ್ರ ಮತ್ತು ಬಿಜೆಪಿಯ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರು, ಪಕ್ಷದ ರಾಷ್ಟಿçÃಯ ಪದಾಧಿಕಾರಿಗಳನ್ನು ಒಳಗೊಂಡ ೧೧,೫೦೦ ಕಾರ್ಯಕರ್ತರು ಭಾಗವಹಿಸಿದ್ದರು.

Next Article