ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ

02:11 PM Jan 03, 2024 IST | Samyukta Karnataka

ಬೆಂಗಳೂರು: ನಮ್ಮ ಸರ್ಕಾರದ ಈ ಮಹತ್ವದ ಹೆಜ್ಜೆ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಭರವಸೆಯಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಅವರು ಬೆಂಗಳೂರು ನಿವಾಸಿಗಳ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಇತ್ಯರ್ಥಪಡಿಸಲು ಕೆಆರ್‌ಪುರಂನ ಅಂಬೇಡ್ಕರ್‌ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ "ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿರುವ ಅವರು "ನಾಗರಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದೇವೆ. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಪರಿಶೀಲಿಸಲು ಹಲವು ತಾಂತ್ರಿಕ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕಾಗಿ ಎಲ್ಲಾ ಇಲಾಖೆಯ ಸಿಬ್ಬಂದಿ ನಿಮ್ಮ ಸೇವೆಗೆ ಲಭ್ಯರಿರುತ್ತಾರೆ. ನಮ್ಮ ಸರ್ಕಾರದ ಈ ಮಹತ್ವದ ಹೆಜ್ಜೆ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಭರವಸೆಯಿದೆ. ಜನರ ಸೇವೆಯೇ ನಮ್ಮ ಧ್ಯೇಯವಾಗಿದ್ದು, ಅದರ ಸಾಕಾರಕ್ಕಾಗಿ ನಾವು ಬದ್ಧರಾಗಿದ್ದೇವೆ ಎಂದರು.

Next Article