ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮನೆ ಬಿದ್ದು ಮೂವರ ಸಾವು

08:59 AM Jul 19, 2024 IST | Samyukta Karnataka

ಹಾವೇರಿ: ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ ಮಕ್ಕಳು ಹಾಗೂ ಮಹಿಳೆ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಬೆಳಗಿನ ಜಾವ 4 ಗಂಟೆ ವೇಳೆಗೆ ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ ಚನ್ನಮ್ಮ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮನೆ ಮಾಲೀಕ ಮುತ್ತು ದೊಡ್ಡಬಸಪ್ಪ ಹರಕುಣಿ (35), ಪತ್ನಿ ಸುನೀತಾ ಮುತ್ತು ಹರಕುಣಿ (25) ತಾಯಿ ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (30) ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

ಘಟನಾ ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಮಹಮ್ಮದ ಖಿಜರ್‌, ತಹಸೀಲ್ದಾರ್ ಭರತರಾಜ್ ಕೆ.ಎನ್., ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Next Article