ಮಲತಾಯಿ ಧೋರಣೆ ಮಾಡಿಲ್ಲ…
ಕೇಂದ್ರ ಸರಕಾರವು ಎಲ್ಲಾ ರಾಜ್ಯ ಗಳಿಗೂ ಹಣಕಾಸು ಆಯೋಗದ ನಿಯಮದಂತೆ ಹಣ ಹಂಚಿಕೆ ಮಾಡುತ್ತಿದೆ, ಕೇಂದ್ರ ಸರಕಾರವು ಹಣಕಾಸು ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ.
ಮಂಗಳೂರು: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ತೆರಿಗೆ ಹಂಚಕೆಯಲ್ಲಿ ಮಲತಾಯಿ ಧೋರಣೆ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿ ಸಿಟಿಝನ್ಸ್ ಕೌನ್ಸಿಲ್ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಭಿಕರೊಬ್ಬರ ಪ್ರಶ್ನೆಗೆ ಉತ್ತರಿಸಿದರು. ಕರ್ನಾಟದ ವಿರುದ್ಧ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂಬುದು ಆಧಾರ ರಹಿತ ಆರೋಪ. ಕೇಂದ್ರ ಸರಕಾರವು ಎಲ್ಲಾ ರಾಜ್ಯ ಗಳಿಗೂ ಹಣಕಾಸು ಆಯೋಗದ ನಿಯಮದಂತೆ ಹಣ ಹಂಚಿಕೆ ಮಾಡುತ್ತಿದೆ, ಕೇಂದ್ರ ಸರಕಾರವು ಹಣಕಾಸು ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಈ ಹಿಂದೆ ಯುಪಿಎ ಸರ್ಕಾರ ನೀಡುತ್ತಿದ್ದ ಪಾಲು ಈಗ ಬಿಜೆಪಿ ಸರ್ಕಾರ ನೀಡುತ್ತಿರುವ ಪಾಲನ್ನು ತುಲನೆ ಮಾಡಿ ಹೇಳಲಿ. 2014ರಿಂದ 2024ರವರೆಗೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೀಡಿದ ಪಾಲು ಮೊದಲಿಗಿಂತ ಹೆಚ್ಚಿದೆ. ಎಲ್ಲ ರಾಜ್ಯಗಳಿಗೆ ಹೆಚ್ಚಾಗಿ ನೀಡಲಾಗಿದೆ. ಮುಖ್ಯಮಂತ್ರಿ ಅವರು ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಹಣಕಾಸು ಸಮಿತಿ ಎಲ್ಲವನ್ನು ನಿರ್ಧಾರ ಮಾಡುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.