ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಳೆ ಹಾನಿ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

04:13 PM Oct 26, 2024 IST | Samyukta Karnataka

ಬೆಂಗಳೂರು: ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಆಗಿರುವ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ, ಮಾಹಿತಿ ಪಡೆದು, ಪರಿಹಾರ ಕಾರ್ಯಗಳ ಶೀಘ್ರ ಅನುಷ್ಠಾನಕ್ಕೆ ಸೂಚನೆ ನೀಡಿದರು.
ಅವರು ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ ಉಂಟಾದ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ

*ಮುಂಗಾರು ಅವಧಿಯಲ್ಲಿ ಅಂದರೆ ಜೂನ್‌ 1ರಿಂದ ಸೆಪ್ಟಂಬರ್‌ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ 978 ಮಿ.ಮೀ ಮಳೆ ದಾಖಲಾಗಿದೆ. ಮುಂಗಾರು ಅವಧಿಯಲ್ಲೂ ಶೇ.15ರಷ್ಟು ಹೆಚ್ಚುವರಿ ಮಳೆಯಾಗಿತ್ತು.

*ರಾಜ್ಯದ ಪ್ರಮುಖ ಜಲಾಶಯಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು, ಪ್ರಸ್ತುತ 871.26 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು 505.81 ಟಿಎಂಸಿ ಇತ್ತು.

*ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ಬಿತ್ತನೆ ಬೀಜ ಲಭ್ಯವಿದೆ. ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿರುವಂತೆ ನೋಡಿಕೊಳ್ಳಬೇಕು.

*ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವಾನ ನೀಡುವ ಕಾರ್ಯ ಮಾಡಬೇಕು ಎಂಬ ಸೂಚನೆ ನೀಡಲಾಗಿದೆ.

*ಬೆಂಗಳೂರು ನಗರದಲ್ಲಿ ಈ ವರ್ಷ ಅಕ್ಟೋಬರ್‌ ತಿಂಗಳಲ್ಲಿ 275 ಮಿಮೀ ಮಳೆಯಾಗಿದ್ದು, ಇದು 3ನೇ ಅತಿ ಹೆಚ್ಚು ಮಳೆಯಾಗಿದೆ. 2005ರಲ್ಲಿ ಈ ಅವಧಿಯಲ್ಲಿ 407 ಮೀಮೀ ಮಳೆಯಾಗಿತ್ತು.

*ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

*ಕೆರೆಗಳಿಗೆ ರೂ.50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.

Tags :
#ಮಳೆಹಾನಿ#ಸಿದ್ದರಾಮಯ್ಯ
Next Article