ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಾಕುಂಭದಲ್ಲಿ ಕಾಲ್ತುಳಿತ: ವದಂತಿಗಳಿಗೆ ಕಿವಿಗೊಡದಂತೆ ಸಿಎಂ ಮನವಿ

10:37 AM Jan 29, 2025 IST | Samyukta Karnataka

ಸಂಗಮ ನಗರಕ್ಕೆ ಭಕ್ತರ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದ್ದು. ಜನರ ಗುಂಪನ್ನು ನಗರದ ಹೊರಗೆ ನಿಲ್ಲಿಸಲಾಗಿದೆ.

ಪ್ರಯಾಗ್​ರಾಜ್(ಉತ್ತರ ಪ್ರದೇಶ): ಮಹಾಕುಂಭದಲ್ಲಿ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡ ಘಟನೆ ನಡೆದಿದೆ.
ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಹಲವರು ಗಾಯಗೊಂಡ ಘಟನೆ ನಡೆದಿದೆ. ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ 2ನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಅಖಿಲ ಭಾರತೀಯ ಅಖಾರಾ ಪರಿಷತ್ ಅಧ್ಯಕ್ಷ ಶ್ರೀ ಮಹಾಂತ ರವೀಂದ್ರ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವಿನ ಭರವಸೆ: ಪ್ರಧಾನಿ ಮೋದಿಯವರು ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಬಹಳ ಜಾಗರೂಕರಾಗಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅದೇ ಸಮಯದಲ್ಲಿ, ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು. ಅಮಿತ್ ಶಾ ಅವರು ಮುಖ್ಯಮಂತ್ರಿಯಿಂದ ದೂರವಾಣಿ ಮೂಲಕ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಕ್ತರು ಸಂಗಮದ ಮಧ್ಯ ಭಾಗಕ್ಕೆ ತೆರಳಬೇಡಿ, ಹತ್ತಿರದ ಘಾಟ್​ನಲ್ಲಿ ಸ್ನಾನಮಾಡಿ ಎಂದು ಮನವಿ ಮಾಡಿದ್ದಾರೆ. ಆಡಳಿತ ನೀಡುವ ಸೂಚನೆಗಳನ್ನು ಪಾಲಿಸಿ ಆಡಳಿತಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.

Tags :
#Kumbh#Kumbh2025#Mahakumbh2025#MahakumbhStampede#Prayagraj#Stampede
Next Article