ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ನಾಲ್ವರ ಮೃತದೇಹ ಇಂದು ಸಂಜೆ ಬೆಳಗಾವಿಗೆ

11:45 AM Jan 30, 2025 IST | Samyukta Karnataka

ಮಹಾ ಕುಂಭಮೇಳಕ್ಕೆ ತೆರಳಿರುವ ನಿಮ್ಮ ಕುಟುಂಬಸ್ಥರು ಸಂಪರ್ಕಕ್ಕೆ ಸಿಗುತ್ತಿಲ್ಲವಾದರೆ, 080-22340676 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು

ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರು ಕನ್ನಡಿಗರ ಮೃತದೇಹವನ್ನು ಇಂದು ಸಂಜೆ ವೇಳೆಗೆ ಬೆಳಗಾವಿಗೆ ತರಲಾಗುವುದು ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮೃತಪಟ್ಟವರ ಮೃತದೇಹವನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಬರಲಾಗಿದೆ. ಅಲ್ಲಿಂದ ಬೆಳಗಾವಿಗೆ ನಾಲ್ವರ ಮೃತದೇಹಗಳನ್ನು ತೆಗೆದುಕೊಂಡು ಬರುವುದಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಪ್ರಯಾಗ್ ರಾಜ್‌ನಿಂದ ಆ್ಯಂಬುಲೆನ್ಸ್ ಮೂಲಕ ದೆಹಲಿಗೆ ಮೃತದೇಹಗಳನ್ನು ತೆಗೆದುಕೊಂಡು ಬರಲಾಗಿದೆ. ಮಹಾ ಕುಂಭಮೇಳದಲ್ಲಿ ಗಾಯಗೊಂಡವರು ಸಹ ವಿಮಾನದ ಮೂಲಕ ಬೆಳಗಾವಿಗೆ ಬರಲಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ವಿಮಾನ ಹಾರಾಟ ಪ್ರಾರಂಭಿಸಲಿದ್ದು. ಸಂಜೆ 5.30ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಈ ಸಂಬಂಧ ಈಗಾಗಲೇ ಕರ್ನಾಟಕದ ಮೂವರು ನೋಡಲ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ನೇಮಿಸಿದ್ದು. ಇವರೆಲ್ಲ ದೆಹಲಿಗೆ ತಲುಪಿದ್ದಾರೆ.

ಇನ್ನು ಮಹಾ ಕುಂಭಮೇಳದಲ್ಲಿ ಕನ್ನಡಿಗರು ಗಾಯಗೊಂಡಿರುವುದು ಇಲ್ಲವೇ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ. ಯಾವುದೇ ಆಸ್ಪತ್ರೆಗಳಲ್ಲಿ ಇನ್ನೂ ಯಾರಾದರೂ ಗಾಯಗೊಂಡಿರುವವರು ಇದ್ದಾರೆ ಎನ್ನುವುದನ್ನು ಪರಿಶೀಲಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕದ ನೋಡಲ್‌ ಅಧಿಕಾರಿ, ಐಎಎಸ್‌ ಹರ್ಷಲ್ ಭೊಯರ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ನೆರವಿಗೆ ಸಹಾಯವಾಣಿ ತೆರೆದ ರಾಜ್ಯ ಸರಕಾರ

Tags :
#Mahakumbh2025#MahakumbhStampede#ಕುಂಭಮೇಳ#ಬೆಳಗಾವಿ
Next Article