ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಾದಾಯಿ: ಸುಪ್ರೀಂ ವಿಚಾರಣೆ ಆರಂಭ

08:07 PM Jan 10, 2024 IST | Samyukta Karnataka

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಗೋವಾ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ವಿಶೇಷ ಅರ್ಜಿಯ ವಿಚಾರಣೆ ಬುಧವಾರ ಆರಂಭಗೊಂಡಿದೆ. ಕಳೆದ ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿಲ್ಲ.
ಅರ್ಜಿ ಮೇಲಿನ ತೀರ್ಪು ಗೋವಾ ರಾಜ್ಯದ ನೀರಿನ ಹಂಚಿಕೆ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದು ಈ ಅರ್ಜಿ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಮಹದಾಯಿ ವಿಚಾರವಾಗಿ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಜನವರಿ ೧೧ರಂದು ಕೂಡ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರಿಂದಾಗಿ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ಈ ಎರಡೂ ರಾಜ್ಯಗಳ ಗಮನ ನ್ಯಾಯಾಲಯದತ್ತ ನೆಟ್ಟಿದೆ.
ಏನಿದು ಪ್ರಕರಣ..?:
ಕರ್ನಾಟಕದಲ್ಲಿ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ಮಹದಾಯಿ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಗೋವಾದಲ್ಲಿ ಪ್ರತಿಪಕ್ಷಗಳು ಮತ್ತು ಪರಿಸರವಾದಿಗಳು ಈ ನಿಟ್ಟಿನಲ್ಲಿ ಗೋವಾ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Next Article