ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಹಾನ್ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ

02:01 PM Jan 21, 2025 IST | Samyukta Karnataka

ಗಾಂಧೀಜಿ ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ

ಬೆಳಗಾವಿ: ಗಾಂಧೀಜಿಯವರು 1924 ರಲ್ಲಿ‌ ಕಾಂಗ್ರೆಸ್‌ನ ಐತಿಹಾಸಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದಿರುವುದು ನಮಗೆಲ್ಲ ಹೆಮ್ಮೆಯ‌ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣದ ವೇಳೆ ಮಾತನಾಡಿ ಮಹಾತ್ಮಾ ಗಾಂಧೀಜಿಯವರು ಅಂದು ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತು ಪ್ರತಿಪಾದನೆ ಮಾಡಿದ್ದರು.
ಗಾಂಧೀಜಿಯವರು ಸದಾ‌ ಶ್ರೀರಾಮನ ಸ್ಮರಣೆ‌‌ಮಾಡುತ್ತಿದ್ದರು. ಅವರು‌ ಅಪ್ಪಟ‌ ಹಿಂದೂ ಎಂಬುದಕ್ಕೆ‌ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಅವರು ಎಂದೂ ಹಿಂದೂ ವಿರೋಧಿಯಾಗಿರಲಿಲ್ಲ, ಆದರೆ ಹಿಂದೂ‌ ಧರ್ಮದಲ್ಲಿ ಸಮಾನತೆ‌ ಮತ್ತು‌ ಸಹೋದರತೆಯನ್ನು ಬಯಸಿದ್ದರು.
"ಹೇ ರಾಮ್‌" ಎನ್ನುತ್ತಲೇ ಕೊನೆಯುಸಿರೆಳೆದರು. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡ ಮಹಾತ್ಮಾ‌ ಗಾಂಧೀಜಿಯವರ ತತ್ವಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ.
ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು, ಇಂದಿನ ಯುವಜನತೆಗೆ ಹಾಗೂ ಮುಂದಿನ ಪೀಳಿಗೆಗೆ ಗಾಂಧೀಜಿಯವರ ವಿಚಾರಧಾರೆಯನ್ನು ತಲುಪಿಸುವ ಉದ್ಧೇಶದಿಂದ ಪುತ್ಥಳಿಯನ್ನು ಸ್ಥಾಪಿಸಲಾಗಿದೆ ಎಂದರು.

Tags :
#ಜೈ ಬಾಪು#ಬೆಳಗಾವಿ#ಸಿದ್ದರಾಮಯ್ಯ#ಸುವರ್ಣಸೌಧ
Next Article