ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಟೆಂಟ್ಗಳು
05:43 PM Jan 19, 2025 IST
|
Samyukta Karnataka
ಪ್ರಯಾಗ್ರಾಜ್: ಮಹಾ ಕುಂಭಮೇಳದ ಟೆಂಟ್ ಸಿಟಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಗಢ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಅಕ್ಕಪಕ್ಕದ ಡೇರೆಗಳಿಗೂ ಅಗ್ನಿ ಜ್ವಾಲೆ ವ್ಯಾಪಿಸಿದೆ.
ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2 ಸಿಲಿಂಡರ್ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದ್ದು, ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಆದರೆ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು ಬೆಂಕಿ ನಂದಿಸಿದ್ದಾರೆ.
"ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲಾಗಿದೆ. ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಮತ್ತು ಯಾರೂ ಗಾಯಗೊಂಡಿಲ್ಲ. ತನಿಖೆ ನಡೆಸಲಾಗುವುದು ಎಂದು ಎಡಿಜಿ ಭಾನು ಭಾಸ್ಕರ್ ಹೇಳಿದ್ದಾರೆ.
Next Article