For the best experience, open
https://m.samyuktakarnataka.in
on your mobile browser.

ಮಹಿಳಾ ಕ್ರಿಕೆಟ್‌: ಭಾರತ ತಂಡ ಪ್ರಕಟ

09:33 PM Dec 25, 2023 IST | Samyukta Karnataka
ಮಹಿಳಾ ಕ್ರಿಕೆಟ್‌  ಭಾರತ ತಂಡ ಪ್ರಕಟ

ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಏಕದಿನ ಹಾಗೂ ಮೂರು ಟಿ-೨೦ ಪಂದ್ಯಗಳ ಸರಣಿ ನಡೆಯಲಿದ್ದು, ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಏಕದಿನ ಹಾಗೂ ಟಿ-೨೦ ತಂಡಗಳನ್ನು ಅನುಭವಿ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಕರ್ನಾಟಕದ ಯುವ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಎರಡೂ ತಂಡಗಳಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೆ, ಏಕೈಕ ಟೆಸ್ಟ್ ಪಂದ್ಯವನ್ನು ಆಡಿದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಎರಡೂ ತಂಡಗಳಲ್ಲಿ ಸ್ಥಾನ ಗಳಿಸಲು ವಿಫಲರಾಗಿದ್ದಾರೆ.
ಇದೀಗ ಏಕದಿನ ಮತ್ತು ಟಿ-೨೦ ಸರಣಿಯಲ್ಲಿಯೂ ಇದೇ ರೀತಿಯ ಪ್ರದರ್ಶನಗಳನ್ನು ಮುಂದುವರೆಸಲು ಎದುರು ನೋಡುತ್ತಿದೆ. ದಲ ಏಕದಿನ ಪಂದ್ಯವು ಗುರುವಾರ, ಡಿ ೨೮ರಂದು ನಡೆಯಲಿದ್ದರೆ, ಇನ್ನು ಮೊದಲ ಟಿ೨೦ ಪಂದ್ಯವು ಶುಕ್ರವಾರ, ಜನವರಿ ೫ರಂದು ಜರುಗಲಿದೆ. ರು ಪಂದ್ಯಗಳ ಏಕದಿನ ಸರಣಿಯು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದ್ದರೆ, ಟಿ-೨೦ ಸರಣಿಯು ನವಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ.
ಭಾರತ ಮಹಿಳಾ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತಾçಕರ್, ಸ್ನೇಹ್ ರಾಣಾ, ಹರ್ಲೀನ್ ಡಿಯೋಲ್.
ಭಾರತ ಮಹಿಳಾ ಏಕದಿನ ಟಿ-೨೦ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟೈಟಾಸ್ ಸಾಧು, ಪೂಜಾ ವಸ್ತ್ರಾಕರ್‌,ಮಿನ್ನು ಮಣಿ.