ಮಹಿಳಾ ಸಬಲೀಕರಣ ಬಡತನ ನಿರ್ಮೂಲನೆಯ ಸಾಧನ
02:29 PM Nov 14, 2024 IST | Samyukta Karnataka
ಮಂಗಳೂರು: ಮಹಿಳಾ ಸಬಲೀಕರಣವು ಬಡತನ ನಿರ್ಮೂಲನೆಯ ಸಾಧನವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿಂದು ಆಯೋಜಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಮಹಿಳೆಯರ ಸಬಲೀಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಂಘಗಳ ಪಾತ್ರ ಮಹತ್ವದ್ದಾಗಿದ್ದು, ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಂಡು ತಮ್ಮ ಉತ್ಪನ್ನಗಳಿಗೆ ತಾವೇ ಮಾರುಕಟ್ಟೆ ವ್ಯವಸ್ಥೆಯನ್ನೂ ಕಲ್ಪಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಮಹಿಳೆಯರು ತಮ್ಮ ಗೌರವವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮಹಿಳಾ ಸಬಲೀಕರಣವು ಬಡತನ ನಿರ್ಮೂಲನೆಯ ಸಾಧನವಾಗಿದೆ. ಸಂಘಸಂಸ್ಥೆಯಿಂದ ತಯಾರಾದ ಉತ್ಪನ್ನಗಳಿಗೆ ಆನ್ಲೈನ್ ಮಾರುಕಟ್ಟೆ ಕಲ್ಪಿಸುವ ಮೂಲಕ ಡಿಜಿಟಲ್ ಆದಾಯ ಗಳಿಸಲು ಸಹಕಾರಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದರು.