ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ
04:58 PM Apr 14, 2024 IST | Samyukta Karnataka
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಿನ್ನ (ಏ.13) ವಿ.ಸೋಮಣ್ಣ ಪರ ಪ್ರಚಾರ ಭಾಷಣದ ವೇಳೆ "ಗ್ಯಾರಂಟಿಗಳಿಂದಾಗಿ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ನೋಟಿಸ್ ಜಾರಿ ಮಾಡಲಿದೆ.