ಮಾಜಿ ಪ್ರಧಾನಿ ಮನಮೋಹನ್ ಸಿಂಗ್: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
12:41 PM Dec 27, 2024 IST
|
Samyukta Karnataka
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿ ನೀಡಿ ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಹಾಜರಿದ್ದರು. 92 ವಯಸ್ಸಿನ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ 9:15ರ ಹೊತ್ತಿಗೆ ನಿಧನರಾದರು. ಸಿಂಗ್ ಅವರಿಗೆ ಪತ್ನಿ ಗುರುಶರಣ್ ಕೌರ್ ಕೊಹ್ಲಿ ಮತ್ತು ಉಪಿಂದರ್ ಸಿಂಗ್, ಅಮೃತ್ ಸಿಂಗ್, ದಮನ್ ಸಿಂಗ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ.
Next Article