ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
10:25 PM Dec 26, 2024 IST | Samyukta Karnataka
ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಇದ್ದಾರೆ. ನರೇಂದ್ರ ಮೋದಿಗೂ ಅವರಿಗೂ ಮುನ್ನ ಎರಡು ಅವಧಿಗಳ ಕಾಲ ಅವರು ಭಾರತದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದರು.