For the best experience, open
https://m.samyuktakarnataka.in
on your mobile browser.

ಮಾಜಿ ರಾಜ್ಯಪಾಲರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

05:16 PM Feb 22, 2024 IST | Samyukta Karnataka
ಮಾಜಿ ರಾಜ್ಯಪಾಲರ ಮನೆ  ಕಚೇರಿ ಮೇಲೆ ಸಿಬಿಐ ದಾಳಿ

ಪಣಜಿ: ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಿರು ಜಲವಿದ್ಯುತ್ ಯೋಜನೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕಿಶ್ತಾವರ್‌ನಲ್ಲಿ ಈ ಯೋಜನೆಯ ವಲಯ ಕಡತವನ್ನು ಅನುಮೋದಿಸಲು ೩೦೦ ಕೋಟಿ ರೂ. ಲಂಚ ಸ್ವೀಕರಿಸಿದ ಆರೋಪವಿದೆ.
ಜಮ್ಮು ಮತ್ತು ಕಾಶ್ಮೀರದ ಕಿರು ಹೈಡ್ರೊ ಎಲೆಕ್ಟ್ರಿಕ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಗುರುವಾರ ಬೆಳಗ್ಗೆ ದೆಹಲಿಯ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ನಿವಾಸ ಮತ್ತು ಕಚೇರಿಯಲ್ಲಿ ಶೋಧ ನಡೆಸಿತು. ಇದಲ್ಲದೇ ಜಮ್ಮು ಮತ್ತು ಕಾಶ್ಮೀರದ ೩೦ ಸ್ಥಳಗಳಲ್ಲಿ ಕೇಂದ್ರ ಸಿಬಿಐ ದಾಳಿ ನಡೆಸಿದೆ. ಕಿಶ್ತ್ವಾರ್‌ನ ಚೆನಾಬ್ ನದಿಯ ಉದ್ದೇಶಿತ ಕಿರು ಜಲವಿದ್ಯುತ್ ಯೋಜನೆಗೆ ೨೦೧೯ ರಲ್ಲಿ ೨,೨೦೦ ಕೋಟಿ ರೂ. ಮೌಲ್ಯದ ಗುತ್ತಿಗೆಯನ್ನು ನೀಡಿದ್ದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.
'ಕಳೆದ ೩-೪ ದಿನಗಳಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದೆ. ಹೀಗಿದ್ದರೂ ಸರ್ಕಾರಿ ಸಂಸ್ಥೆಗಳ ಮೂಲಕ ನನ್ನ ಮನೆ ಮೇಲೆ ಸರ್ವಾಧಿಕಾರಿ ದಾಳಿ ನಡೆಸುತ್ತಿದ್ದಾರೆ ಎಂದು ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆರೋಪಿಸಿದ್ದಾರೆ, ನನ್ನ ಕಾರು ಚಾಲಕ ಮತ್ತು ಸಹಾಯಕರ ಮೇಲೂ ದಾಳಿ ನಡೆಸಿ ಕಿರುಕುಳ ನೀಡಲಾಗುತ್ತಿದೆ. ನಾನೊಬ್ಬ ರೈತನ ಮಗ, ಈ ದಾಳಿಗಳಿಗೆ ನಾನು ಹೆದರುವುದಿಲ್ಲ. ನಾನು ರೈತರೊಂದಿಗೆ ಇದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಮಲಿಕ್ ಸಿಬಿಐ ದಾಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ೨೩ ಆಗಸ್ಟ್ ೨೦೧೮ ರಿಂದ ೩೦ ಅಕ್ಟೋಬರ್ ೨೦೧೯ ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಕೂಡ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು ೮ ಸ್ಥಳಗಳಲ್ಲಿ ದಾಳಿ ನಡೆಸಿತ್ತು.