For the best experience, open
https://m.samyuktakarnataka.in
on your mobile browser.

ಮಾಜಿ ವಿದೇಶಾಂಗ ಸಚಿವ ಕೆ. ನಟವರ್ ಸಿಂಗ್ ನಿಧನ

12:52 PM Aug 11, 2024 IST | Samyukta Karnataka
ಮಾಜಿ ವಿದೇಶಾಂಗ ಸಚಿವ ಕೆ  ನಟವರ್ ಸಿಂಗ್ ನಿಧನ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕೆ. ನಟವರ್ ಸಿಂಗ್ ನಿಧನರಾಗಿದ್ದಾರೆ.
ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರು ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 93 ವರ್ಷದ ನಟವರ್ ಸಿಂಗ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅಲ್ಲಿ ಅವರು ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. 'ದಿ ಲೆಗಸಿ ಆಫ್ ನೆಹರೂ: ಎ ಮೆಮೋರಿಯಲ್ ಟ್ರಿಬ್ಯೂಟ್' ಮತ್ತು 'ಮೈ ಚೀನಾ ಡೈರಿ 1956-88' ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

Tags :