For the best experience, open
https://m.samyuktakarnataka.in
on your mobile browser.

ಮಾಜಿ ಶಾಸಕ, ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ

10:53 AM Sep 27, 2024 IST | Samyukta Karnataka
ಮಾಜಿ ಶಾಸಕ  ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ, ಇವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು,

ಕುಂದಾಪುರ : ಬೈಂದೂರಿನ ಮಾಜಿ ಶಾಸಕ ಬಿಜೆಪಿಯ ಹಿರಿಯ ಮುಖಂಡ ಕೆ. ಲಕ್ಷ್ಮೀ ನಾರಾಯಣ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ, ಇವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು, ಬೈಂದೂರಿನ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡರಾದ ಕೆ. ಲಕ್ಷ್ಮೀ ನಾರಾಯಣ ಅವರಿಗೆ 85 ವರ್ಷ ವಯಸ್ಸಾಗಿತ್ತು, ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು.ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು.

Tags :