ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ನಿಧನ

09:39 PM Mar 16, 2024 IST | Samyukta Karnataka

ದಾವಣಗೆರೆ: ಮಾಜಿ ಸಚಿವೆ, ದಾವಣಗೆರೆಯ ‘ಮದರ್ ಥೆರೇಸಾ’ ಎಂದೇ ಹೆಸರಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಶನಿವಾರ ಸಂಜೆ 4.30ಕ್ಕೆ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಮಾಯಕೊಂಡ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಎರಡು ಬಾರಿ ಮಂತ್ರಿಯಾಗಿ ಒಮ್ಮೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು. ಗುಂಡೂರಾವ್ ಹಾಗೂ ವೀರಪ್ಪ ಮೊಯ್ಲಿ ಅವಧಿಯಲ್ಲಿ ಶಿಕ್ಷಣ ಮಂತ್ರಿಗಳಾಗಿ, ಒಮ್ಮೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಯಾಗಿ ಅಪ್ರತಿಮ ಸೇವೆ ಸಲ್ಲಿಸಿದ್ದರು. ಕೆಲವಾರು ತಿಂಗಳಿಂದ ಅನಾರೋಗ್ಯ ಪೀಡಿತರಾಗಿದ್ದ ನಾಗಮ್ಮ ಕೇಶವಮೂರ್ತಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಪುತ್ರ ಡಾ|| ಸಿ.ಕೆ.ಜಯಂತ್, ಸೊಸೆ ಡಾ|| ಶೀಲಾ ಜಯಂತ್ ಹಾಗೂ ಮೊಮ್ಮಗಳನ್ನು ಅಗಲಿರುವ ನಾಗಮ್ಮನವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ.
ಬೆಂಗಳೂರಿನ ಎಂ.ಎನ್.ರಾಮನ್ ಮತ್ತು ಸಾಕಮ್ಮ ದಂಪತಿ ಪುತ್ರಿಯಾಗಿದ್ದ ನಾಗಮ್ಮನವರು 1951ರಲ್ಲಿ ದಾವಣಗೆರೆಯ ಉದ್ಯಮಿ, ಚನ್ನಗಿರಿ ರಂಗಪ್ಪನವರ 2ನೇ ಪುತ್ರ ಸಿ ಕೇಶವಮೂರ್ತಿ ಅವರನ್ನು ವಿವಾಹವಾಗಿ ದಾವಣಗೆರೆಗೆ ಬಂದರು. ತಮ್ಮ ಅತ್ತೆ ರಾಧಮ್ಮ ಅವರ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿದರು. 1955ರಲ್ಲಿ ವನಿತಾ ಸಮಾಜವನ್ನು ಆರಂಭಿಸಿ ಅದರಲ್ಲಿ 52 ಅಂಗ ಸಂಸ್ಥೆಗಳನ್ನು ಸ್ಥಾಪಿಸಿದರು.
ವನಿತಾ ಸಮಾಜದ ಆತ್ಮ: ‘ಸೇವೆಯೇ ಪರಮೋ ರ‍್ಮಹ’ ಎಂಬ ಧ್ಯೇಯ ವಾಕ್ಯದಡಿ ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಸಾಯುವ ಹಂತದವರೆಗೆ ಮಹಿಳೆಗೆ ಎಲ್ಲ ರೀತಿಯ ನೆರವು, ಸೌಲಭ್ಯ, ಸ್ವಾವಲಂಬನೆಗೆ ದಾರಿ ಹುಡುಕಿ ಕೊಟ್ಟ ನಾಗಮ್ಮನವರು ದಾವಣಗೆರೆಯ ಮದರ್ ಥೆರೇಸಾ ಎಂದೇ ಖ್ಯಾತರಾಗಿದ್ದರು.ವನಿತಾ ಸಮಾಜ ಅವರ ನಿಜವಾದ ಆತ್ಮವಾಗಿತ್ತು.
ರಾಜಕೀಯ, ಶಿಕ್ಷಣ, ಸಮಾಜ ಸೇವೆ, ಮಹಿಳಾ ಜಾಗೃತಿ, ಸಂಗೀತ, ಸಾಹಿತ್ಯ, ಹಾಸ್ಯ, ಆಧ್ಯಾತ್ಮ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ನಾಗಮ್ಮನವರು ಜನ ಮೆಚ್ಚಿದ ನಾಯಕಿಯಾಗಿದ್ದರು.
ರಾಜಕೀಯ ಪ್ರವೇಶದ ನಂತರ ರಾಷ್ಟ್ರಮಟ್ಟದಲ್ಲಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ದೇವರಾಜ ಅರಸು, ಎಸ್.ನಿಜಲಿಂಗಪ್ಪ, ಮಾರ್ಗರೇಟ್ ಆಳ್ವ ನಂತರ ನಾಗಮ್ಮ ಹೆಸರು ಮಾಡಿದ್ದರು.

Next Article