For the best experience, open
https://m.samyuktakarnataka.in
on your mobile browser.

ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

04:06 PM Jul 22, 2024 IST | Samyukta Karnataka
ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಮೊದಲಿಗೆ ಆರು ದಿನ ಮತ್ತು ಆನಂತರ ಐದು ದಿನ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯವು ಇ ಡಿ ಕಸ್ಟಡಿಗೆ ತನಿಖೆಗಾಗಿ ನೀಡಿತ್ತು. ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ ಬಿ ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶುರಾಮ ದುರ್ಗಣ್ಣವರ ಅವರು ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ.