For the best experience, open
https://m.samyuktakarnataka.in
on your mobile browser.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

01:18 PM Apr 15, 2024 IST | Samyukta Karnataka
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಲೋಕಸಭೆಯ ಚುನಾವಣೆಯ ಹಾವೇರಿ-ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು‌. ಮಾಜಿ ಸಚಿವ ಬಿ.ಸಿ. ಪಾಟೀಲ, ಶಾಸಕ ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದರು.
ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬೊಮ್ಮಾಯಿ ಎಪ್ರೀಲ್ 19ರಂದು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲು ಹಾವೇರಿಗೆ ತೆರಳುವುದಿಕ್ಕಿಂತ ಮುಂಚೆ ಹುಬ್ಬಳ್ಳಿಯಲ್ಲಿರುವ ಅವರ ಪೂಜ್ಯ ತಂದೆ-ತಾಯಿಯವರ ಗದ್ದುಗೆಗೆ ತೆರಳಿ, ಪೂಜೆ ಸಲ್ಲಿಸಿ, ಅವರ ಆಶೀರ್ವಾದ ಪಡೆದುಕೊಂಡರು.