ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಲ್‌ಗಳಿಗೆ ಬಾಂಬ್ ಬೆದರಿಕೆ

08:08 PM Aug 19, 2024 IST | Samyukta Karnataka

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಮಾಲ್‌ಗಳಿಗೆ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದ್ದು, “ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ. ನಿಮ್ಮನ್ನೆಲ್ಲಾ ಕೊಲ್ಲುತ್ತೇನೆ, ನಾವು ಭಯೋತ್ಪಾದನೆಯನ್ನು ನಿಲ್ಲಿಸುವುದಿಲ್ಲ. ಈ ಸಂದೇಶ ಕಳುಹಿಸಿರುವುದು KNR" ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಸುಮಾರು 20ಕ್ಕೂ ಹೆಚ್ಚು ಮಾಲ್​​​ಗಳಿಗೆ ಇಮೇಲ್​​ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿ, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ಹೇಳಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Tags :
bengalorebomb
Next Article