For the best experience, open
https://m.samyuktakarnataka.in
on your mobile browser.

ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೆ, ಕ್ಷಮಿಸಿ…

05:17 PM Apr 23, 2024 IST | Samyukta Karnataka
ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೆ  ಕ್ಷಮಿಸಿ…

ಹುಬ್ಬಳ್ಳಿ: ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ರಾಜ್ಯ ಸರ್ಕಾರದ ಹಾಗೂ ಪೊಲೀಸ್ ಕಮಿಷನರ್ ವಿರುದ್ಧ ಮಾತನಾಡಿದ್ದೇನು. ರಾಜ್ಯ ಸರಕಾರ ಹತ್ಯೆ ಪ್ರಕರಣದಲ್ಲಿ ತ್ವರಿತವಾಗಿ ಕ್ರಮ ಕೈಗೊಂಡಿದೆ. ನನ್ನಿಂದಾದ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ ಎಂದು ಹತ್ಯೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದು ಭಾವಿಸಿ, ಮಾಹಿತಿಯ ಕೊರತೆಯಿಂದ ಸರ್ಕಾರದ ವಿರುದ್ಧ ಮಾತನಾಡಿದ್ದೇನು. ಪ್ರಕರಣದ ಕುರಿತು ಎಲ್ಲ ಮಾಹಿತಿಯನ್ನು ನಮ್ಮ ಪಕ್ಷದವರೇ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ ಎಂದು ಸೋಮವಾರ ತಿಳಿಯಿತು. ನಮ್ಮ ಪಕ್ಷದವರು ತೆರೆಮರೆಯಲ್ಲಿ ನನ್ನ ಮಗಳಿಗೆ ನ್ಯಾಯ ಕೊಡಿಸುವಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಪ್ರಕರಣ ಸಿಐಡಿಗೆ ವಹಿಸುವಲ್ಲಿಯೂ ಅವರ ಪಾತ್ರ ಪ್ರಮುಖವಾಗಿದೆ. ಪೊಲೀಸ್ ಕಮಿಷನರ್ ಅವರು ಸಹ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧವೂ ನಾನು ಅಸಮಧಾನ ವ್ಯಕ್ತಪಡಿಸಿದ್ದೇನು. ನಾನು ಏನೇ ತಪ್ಪು ಮಾತನಾಡಿದರೂ ಅನ್ಯಥಾ ಭಾವಿಸಬಾರದು. ನನ್ನಿಂದಾದ ತಪ್ಪಿಗೆ ಎಲ್ಲರಿಂದಲೂ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದರು.