ಮೀನುಗಾರಿಕಾ ದೋಣಿ ದುರಂತ - ಇಬ್ಬರ ಸಾವು
07:12 PM Dec 18, 2023 IST
|
Samyukta Karnataka
ಕುಂದಾಪುರ : ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಕಹಿ ಘ ಟನೆ ಶಿರೂರು ಕಳಿಹಿತ್ಲು ಎಂಬಲ್ಲಿ ನಡೆದಿದೆ.
ಹಡವಿನಕೋಣೆ ಶಿರೂರಿನ ಅಬ್ದುಲ್ ಸತ್ತರ್ (೪೫ ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಬಾ ಯೂಸುಫ್ (೪೮) ಮೃತರು. ಕಳೆದ ರಾತ್ರಿ ೧೦ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರಿಕೆ ಮೀನುಗಾರರಿದ್ದರು. ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( ೩೭) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ರವರು ರಕ್ಷಣೆ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ. ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬ್ಬಂದಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Article