ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೀನುಗಾರಿಕಾ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ!

12:21 PM Apr 20, 2024 IST | Samyukta Karnataka

ಕಾರವಾರ: ಅರಬ್ಬೀ ಸಮುದ್ರದಲ್ಲಿ ಗಾಳಿ- ಮಳೆಗೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಅದೃಷ್ಟವಶಾತ್ ಬೋಟ್ನಲ್ಲಿ ನಾಲ್ವರು ಮೀನುಗಾರರನ್ನು ಇನ್ನೊಂದು ಬೋಟ್ ಮೀನುಗಾರರು ರಕ್ಷಣೆ ಮಾಡಿದ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ.

ಭಟ್ಕಳದ ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಮುಳುಗಡೆಯಾದ ಬೋಟ್ ಆಗಿದೆ. ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರಿನಿಂದ ಇಂದು ಮುಂಜಾನೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ, ಅರಬ್ಬೀ ಸಮದ್ರದಲ್ಲಿ ಸುಮಾರು 7 ಗಂಟೆಯಿಂದ ಕಾಣಿಸಿಕೊಂಡ ಭಾರೀ ಗಾಳಿಮಳೆಗೆ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ.
ಬಳಿಕ ಅಲ್ಲೆ ಹತ್ತಿರದಲ್ಲಿದ್ದ ಇನ್ನೊಂದು ಬೋಟ್‌ನವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ದುರ್ಘಟನೆಯಿಂದ ಬೋಟ್ ಮಾಲಕರಿಗೆ ಲಕ್ಷಾಂತರ ರೂ. ಹಾನಿಯಾಗಿದೆ.‌ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಸಹಿತ ಮಳೆ ಸುರಿಯಲಾರಂಭಿಸಿದೆ.

Next Article