ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ

04:22 PM May 17, 2024 IST | Samyukta Karnataka

ಬೆಂಗಳೂರು: ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಎಸ್‍ಎಸ್‍ಎಲ್‍ಸಿಯಲ್ಲಿ ಶಿಕ್ಷಣ ಇಲಾಖೆ ಈ ವರ್ಷ ನೀಡಿದ 20% ಗ್ರೇಸ್ ಅಂಕಗಳ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರುವುದಿಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯಂತೆ ಮುಂದುವರಿಯಲಿದೆ, ಯಾವಾಗಲೂ 5% ಗ್ರೇಸ್ ಅಂಕ ಇರ್ತಿತ್ತು. ಕೋವಿಡ್ ವೇಳೆ 10% ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪಾಸಾಗುವಂತೆ ಮಾಡಲು 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಎಂದರು

Next Article