ಮುಂಬಯಿ- ಸೋಲಾಪುರ ವಂದೇ ಭಾರತ್: ವಿಜಯಪುರಕ್ಕೆ ಓಡಿಸಲು ಮನವಿ
ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ರೈಲು ಯೋಜನೆಗಳನ್ನು ಪೂರ್ಣಗೊಳಿಸಲು ವಿಧಾನಸಭಾ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಹಜರತ್ ನಿಜಾಮುದ್ದೀನ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ವಾರದಲ್ಲಿ ಐದು ದಿನ ಓಡಿಸಲು, ಮೈಸೂರು- ಬಾಗಲಕೋಟ ಮಧ್ಯ ಸಂಚರಿಸುವ ಬಸವ ಎಕ್ಸಪ್ರೆಸ್ ರೈಲು ಗದಗ ವರೆಗೆ ವಿಸ್ತರಣೆ, ಮುಂಬಯಿ- ಸೋಲಾಪುರ ವಂದೇ ಭಾರತ್ ರೈಲು ವಿಜಯಪುರ ವರೆಗೆ ಓಡಿಸಲು ಹಾಗೂ ವಿಜಯಪುರ ನಗರದಲ್ಲಿ ಮೇಲ್ಸೆತುವೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದೆ, ಹಾಗೂ ನಮ್ಮ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಬೇಕಾಗಿರುವ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಸಚಿವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದೆ. ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಆದಷ್ಟು ಶೀಘ್ರವಾಗಿ ನಮ್ಮ ಬೇಡಿಕೆ ಈಡೇಸುವ ಭರವಸೆಯಿದೆ ಎಂದಿದ್ದಾರೆ.