For the best experience, open
https://m.samyuktakarnataka.in
on your mobile browser.

ಮುಂಬೈ ರೈಲು ನಿಲ್ದಾಣದಲ್ಲಿ ಬೆಂಕಿ

03:58 PM Dec 13, 2023 IST | Samyukta Karnataka
ಮುಂಬೈ ರೈಲು ನಿಲ್ದಾಣದಲ್ಲಿ ಬೆಂಕಿ

ಮುಂಬೈ : ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಧ್ಯಾಹ್ನ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ರೈಲ್ವೇ ನಿಲ್ದಾಣ ಆವರಣದಲ್ಲಿರುವ ಉಪಾಹಾರ ಗೃಹದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. LTT ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಜನ್ ಆಹಾರ್ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 2.45 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಇಲ್ಲಿಯವರೆಗೆ, ಯಾರಿಗೂ ಗಾಯದ ವರದಿಯಾಗಿಲ್ಲ," ಬೆಂಕಿಯು ನಿಲ್ದಾಣದ ಬುಕಿಂಗ್ ಮತ್ತು ವೇಟಿಂಗ್ ಹಾಲ್‌ಗಳನ್ನು ಸಹ ಆವರಿಸಿದೆ ಎನ್ನಲಾಗಿದೆ.