ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ
12:52 PM Oct 16, 2024 IST
|
Samyukta Karnataka
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರಿಗೌಡಗೆ ಸೂಚಿಸಿತ್ತು. ಮರಿಗೌಡ ವಿರುದ್ಧವೂ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಕೆ.ಮರಿಗೌಡ ರಾಜೀನಾಮೆ ನಿಡಿದ್ದಾರೆ.
Next Article