ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಡಾ ಪ್ರಕರಣ: ಇ.ಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ

03:34 PM Jan 20, 2025 IST | Samyukta Karnataka

ಬೆಂಗಳೂರು: ಮುಡಾ ಪ್ರಕರಣದಲ್ಲಿ ಇ.ಡಿಯವರ ಪತ್ರಿಕಾ ಪ್ರಕಟಣೆಯು ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿರುವ ಅವರು ಇ.ಡಿಯವರ ಪತ್ರಿಕಾ ಪ್ರಕಟಣೆಗೂ, ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದು ದೂರಿದರು.

ಹಣ ದುರುಪಯೋಗದ ಪ್ರಶ್ನೆ ಇಲ್ಲ: ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ. ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್ : ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

Tags :
#ED#ಬೆಂಗಳೂರು#ಮುಡಾನಿವೇಶನ#ಸಿದ್ದರಾಮಯ್ಯ
Next Article