ಮುರ್ಡೇಶ್ವರ ದುರಂತ: ಪ್ರಾಂಶುಪಾಲ ಅಮಾನತು, ಐವರು ಅತಿಥಿ ಶಿಕ್ಷಕರರು ಸೇರಿ ಆರು ಜನ ವಜಾ
09:19 PM Dec 11, 2024 IST | Samyukta Karnataka
ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಐವರು ಅತಿಥಿ ಶಿಕ್ಷಕರನ್ನು ವಜಾ ಮಾಡಿ, ಗ್ರೂಪ್ ಡಿ ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದಾಗ ನಾಲ್ವರು ವಿದ್ಯಾರ್ಥಿನಿಯರು ಮಂಗಳವಾರ ಸಮುದ್ರಪಾಲಾಗಿದ್ದರು.