ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಸ್ಲಿಮರ ಒತ್ತಡ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

08:37 PM Sep 04, 2024 IST | Samyukta Karnataka

ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕುಂದಾಪುರ ಸರ್ಕಾರಿ ಪವಿದಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರನ್ನು ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಿಂದ ಕೈಬಿಟ್ಟಿದೆ. ಮುಸ್ಲಿಮರ ಆಕ್ಷೇಪ ಈ ಘಟನೆಗೆ ಕಾರಣವಾಗಿದ್ದು, ಸರ್ಕಾರದ ನಡೆ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿದೆ.
ಕಳೆದ ಎರಡು ವರ್ಷದ ಹಿಂದೆ ಹಿಜಾಬ್ ವಿವಾದ ಸಂದರ್ಭ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನಲ್ಲಿ ತಡೆದು ನಿಲ್ಲಿಸಿದ್ದ ರಾಮಕೃಷ್ಣ ಬಿ.ಜಿ. ಅವರನ್ನು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಬಗ್ಗೆ ಮುಸ್ಲಿಮರು ಆಕ್ಷೇಪಿಸಿದ್ದರು.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರ ರಾಮಕೃಷ್ಣ ಅವರನ್ನು ಪ್ರಶಸ್ತಿ ಪುರಸ್ಕೃತರ ಪಟ್ಟಿಯಿಂದ ಕೈ ಬಿಟ್ಟಿದ್ದು, ಈ ಬಗ್ಗೆ ಇಲಾಖೆಯಿಂದ ಸೂಚನೆ ಬಂದಿದೆ ಎನ್ನಲಾಗಿದೆ. ರಾಮಕೃಷ್ಣ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಕರೆಗೆ ಲಭ್ಯವಾಗಿಲ್ಲ.

Next Article