ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ

08:32 PM Oct 24, 2024 IST | Samyukta Karnataka

ಹುಬ್ಬಳ್ಳಿ: ರಾಜ್ಯದಲ್ಲಿ ಘೋಷಣೆಯಾಗಿರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಮೂರೂ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವರದಿ ತರಿಸಿಕೊಂಡು ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಿದ್ದಾರೆ. ಎಲ್ಲಡೆ ಬಿಜೆಪಿ ಪರವಾದ ಅಲೆ ಇದೆ. ನಮ್ಮ ಗೆಲುವು ನೂರಕ್ಕೆ ನೂರು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಮಾತನಾಡಿದ ಅವರು, ಆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾದ ಅಲೆ ಇದೆ. ಅವರು ಅಧಿಕಾರ ಇಲ್ಲದಿದ್ದಾಗಲೂ ನಿರಂತರವಾಗಿ ಕ್ಷೇತ್ರದ ಜನತೆಯ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಹೀಗಾಗಿ ಅವರ ಗೆಲುವು ಸುಲಭವಾಗಲಿದೆ. ಇನ್ನು ಪಕ್ಷ ಬಿಟ್ಟವರು, ಪಕ್ಷಕ್ಕೆ ದ್ರೋಹ ಮಾಡಿದವರ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಸಿ.ಪಿ. ಯೋಗೀಶ್ವರ ವಿರುದ್ಧ ಟೀಕಿಸಿದರು.
ಕುಟುಂಬ ರಾಜಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಬಿಎಸ್‌ವೈ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಕುಟುಂಬಕ್ಕೆ ಟಿಕೆಟ್ ಬೇಡವೇ ಬೇಡ ಎಂದಿದ್ದರು. ಆದರೆ, ವರಿಷ್ಠರ ಒತ್ತಾಯದ ಮೇರೆಗೆ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದ್ದಾರೆ ಎಂದು ತಿಳಿಸಿದರು.

Tags :
#BSY#ByElectionbjpelectionNDAyediyurappa
Next Article