ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿ: ದೇವೇಗೌಡರ ಮನವಿ

01:15 AM Feb 07, 2024 IST | Samyukta Karnataka

ನವದೆಹಲಿ : ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ರಾಜ್ಯಸಭೆಯಲ್ಲಿ ಮಂಗಳವಾರ ಮನವಿಕೊಂಡರು.
ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟರಲ್ಲದೆ, ಕೇಂದ್ರ ಸರ್ಕಾರವು ೩೦ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಪುನರುಚ್ಚರಿಸಿದರು.
ಮೀಸಲಾತಿ ಬಗ್ಗೆ ನಾನು ಯಾರನ್ನೂ ದೂರುವುದಿಲ್ಲ. ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿ ಅನ್ಯಾಯಕ್ಕಾಗಿ ತುತ್ತಾಗಿದೆ. ೨೦೧೪ರಿಂದಲೂ ಇವರನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಪ್ರಸ್ತಾವನೆ ಇತ್ತು. ಈಗ ೨೦೨೪. ಪ್ರಧಾನಮಂತ್ರಿ ಮೋದಿ ಅವರು ಸದನದಲ್ಲಿ ರಾಷ್ಟçಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಅವರ ಗಮನ ಸೆಳೆಯುವುದಕ್ಕಾಗಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದೇನೆ ಎಂದು ದೇವೇಗೌಡರು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸೋ ಕಾಲ್ಡ್ ಗ್ಯಾರಂಟಿಗಳು ಎಂದು ಕಟುವಾಗಿ ಟೀಕಿಸಿದ ಗೌಡರು, ತಾತ್ಕಾಲಿಕ
ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯ
ಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು. ಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ. ನಾನು ತಪುö್ಪ ಮಾಹಿತಿ ಹೇಳಿದ್ದರೆ ಕ್ಷಮೆ ಕೇಳುತ್ತೇನೆ. ಯಾರಿಗೂ, ಯಾವುದಕ್ಕೂ ಅಪಖ್ಯಾತಿ ತರುವ ಉದ್ದೇಶ ನನ್ನದಲ್ಲ ಎಂದರು.

Next Article