For the best experience, open
https://m.samyuktakarnataka.in
on your mobile browser.

ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

04:49 PM Dec 22, 2024 IST | Samyukta Karnataka
ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು ಅರಮನೆ ಫಲಪುಷ್ಪ ಪ್ರದರ್ಶನದಲ್ಲಿ ನೋಡುಗರ ಮನ ಸೆಳೆಯುತ್ತಿರುವ ವಿವಿಧ ಆಕೃತಿಗಳು

ಮೈಸೂರು: ಸಾವಿರಾರು ಫಲಪುಷ್ಪಗಳಿಂದ ವಿವಿಧ ರೀತಿಯ ಕಲಾಕೃತಿಗಳ ನಿರ್ಮಾಣ ಮಾಡಲಾಗಿದ್ದು, ಫಲಪುಷ್ಪ ಪ್ರದರ್ಶನಕ್ಕೆ 25 ಸಾವಿರ ಹೂವಿನ ಕುಂಡಗಳನ್ನು ಇಡಲಾಗಿದ್ದು, ಗುಲಾಬಿ, ಸೇವಂತಿಗೆ, ಜಲಿಯ ಸಾಲ್ವಿಯ, ಚೆಂಡು ಹೂ, ಸೂರ್ಯಕಾಂತಿ ಹೂವುಗಳು ಸೇರಿದಂತೆ ಹಲವು ಬಗೆಯ ಹೂವುಗಳನ್ನು ಇಲ್ಲಿ ಕಾಣಬಹುದಾಗಿದೆ. ಅರಮನೆ, ರಾಜ್ಯ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಕಲಾಕೃತಿ, ಚಾಮುಂಡಿಬೆಟ್ಟದ ನಂದಿ ವಿಗ್ರಹ, ಪಕ್ಷಿಗಳು, ದೆಹಲಿಯ ಅಕ್ಷರಧಾಮ, ಕಾರ್ಗಿಲ್ ವಿಜಯಸ್ತಂಭ, ದಕ್ಷಿಣ ಕಾಶಿಯ ನಂಜುಂಡೇಶ್ವರ, ಗಂಡಭೇರುಂಡ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಕೃತಿ ಸೇರಿದಂತೆ ಹಲವು ವಿಭಿನ್ನ ಚಿತ್ತಾರಗಳನ್ನು ಹೂವುಗಳಲ್ಲಿ ಅರಳಿಸಲಾಗಿದೆ.

ಬೊಂಬೆ ಮನೆ, ಛಾಯಾಚಿತ್ರಗಳ ಪ್ರದರ್ಶನ ಹಾಗೂ ಕುಸ್ತಿ ಪಂದ್ಯಾವಳಿ ಆಯೋಜನೆ : ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಲ್ಲಿ ಮೈಸೂರು ಅರಮನೆ ಮತ್ತು ರಾಜ ಮನೆತನಗಳ ಇತಿಹಾಸ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಬೊಂಬೆಗಳ ಪ್ರದರ್ಶನ ಹಾಗೂ ಅರಮನೆಯ ವರಾಹ ಉದ್ಯೋನವನದಲ್ಲಿ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಬಂದಂತಹ ವೀಕ್ಷಕರ ಗಮನ ಸೆಳೆದವು.

ಫಲಪುಷ್ಪ ಪ್ರದರ್ಶನ ಹಾಗೂ ಅರಮನೆ ದೀಪಾಲಂಕಾರವು ಡಿಸೆಂಬರ್ 21 ರಿಂದ 31 ರವರೆಗೆ ನಡೆಯಲಿದೆ.

ಪ್ರವೇಶ ದರ: ವಯಸ್ಕರಿಗೆ ಮತ್ತು ವಿದೇಶಿ ಪ್ರವಾಸಿಗರಿಗೆ ರೂ.30, 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ.20 ಗಳು ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ.

ಫಲಪುಷ್ಪ ಪ್ರದರ್ಶನವು ಪ್ರತಿದಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, ಅರಮನೆ ವಿದ್ಯುತ್ ದೀಪಾಲಂಕಾರವು ಸಂಜೆ 7 ರಿಂದ 9 ರವರೆಗೆ ಇರಲಿದೆ.

Tags :