For the best experience, open
https://m.samyuktakarnataka.in
on your mobile browser.

ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು

05:43 PM Dec 04, 2023 IST | Samyukta Karnataka
ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು

ಹಾಸನ: ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿ ಅರ್ಜುನ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿರುವ ಅರ್ಜುನ ಆನೆಯು (63 ವರ್ಷ) ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ, ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿ ಅರ್ಜುನ ಆನೆ ಸಾವನ್ನಪ್ಪಿದೆ . ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.