For the best experience, open
https://m.samyuktakarnataka.in
on your mobile browser.

ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ

03:40 PM Mar 09, 2024 IST | Samyukta Karnataka
ಮೈಸೂರು ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ಮೈಸೂರು-ಮಾಣಮಧುರೈ ರೈಲಿಗೆ ಮಾರ್ಚ್ 11 ರಂದು ಚಾಲನೆ ಕೊಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮೈಸೂರು-ಮಾಣಮಧುರೈ ರೈಲಿಗೆ ಮಾರ್ಚ್ 11 ರಂದು ಚಾಲನೆ ಕೊಡುತ್ತೇನೆ. ಸೇತುವೆ (Pamban Bridge) ರಿಪೇರಿ ಕೆಲಸ ಮುಗಿದ ಮೇಲೆ ರೈಲು ರಾಮೇಶ್ವರಂ ವರೆಗೂ ತೆರಳುವುದು ಎಂದಿದ್ದಾರೆ.
ಇನ್ನು ಈ ಕುರಿತು ರೇಲ್ವೆ ಇಲಾಖೆ ಸುತ್ತೋಲೆ ಹೊರಡಿಸಿದ್ದು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲು (06237) ಮಾರ್ಚ್ 11, 2024 ರಂದು ಮೈಸೂರು ನಿಲ್ದಾಣದಿಂದ ಸಂಜೆ 06:35 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 09:10 ಗಂಟೆಗೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಇದೇ ರೈಲು (06238) ಮಾರ್ಚ್ 12, 2024 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 01:55 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರಂ, ಕೆಂಗೇರಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್‌, ಕರೂರ್, ತಿರುಚ್ಚಿರಾಪಳ್ಳಿ, ದಿಂಡಿಗಲ್ & ಮಧುರೈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ವಿಶೇಷ ರೈಲಿನಲ್ಲಿ ಎರಡನೇಯ ಹವಾನಿಯಂತ್ರಿತ ದರ್ಜೆ-2, ಮೂರನೇಯ ಹವಾನಿಯಂತ್ರಿತ ದರ್ಜೆ-6, ಕ್ಲೀಪರ್ ಕ್ಲಾಸ್‌ ಬೋಗಿಗಳು-9, ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟ‌ ಕಾರು-2 ಸೇರಿದಂತೆ ಒಟ್ಟು 21 ಬೋಗಿಗಳು ಒಳಗೊಂಡಿರುತ್ತವೆ ಎಂದಿದ್ದಾರೆ