ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೊದಲು ಅವರ ಬಾಯಿಯನ್ನು ಶುದ್ಧ ಮಾಡಿ

03:56 PM Sep 14, 2024 IST | Samyukta Karnataka

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಕರ್ನಾಟಕ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ. ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ. 40% ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ. ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್‌ ಅಶೋಕ್‌ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ? ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು.

Tags :
#Bangalore#cmsiddaramaiah#ಬೆಂಗಳೂರು#ಮುನಿರತ್ನ#ಸಿದ್ದರಾಮಯ್ಯ
Next Article