ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿ ಅಪರಾಧವನ್ನು ದೇಶ ಎಂದಿಗೂ ಕ್ಷಮಿಸುವುದಿಲ್ಲ...

01:09 PM Apr 24, 2024 IST | Samyukta Karnataka

ನವದೆಹಲ: ಬಿಲಿಯನೇರ್ ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು ಬಿಲಿಯನೇರ್ ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಮನ್ನಾ ಮಾಡಿದ್ದಾರೆ. ಈ ಹಣದಲ್ಲಿ 16 ಕೋಟಿ ಯುವಜನತೆಗೆ ವರ್ಷಕ್ಕೆ ₹1 ಲಕ್ಷ ಸಂಬಳದ ಉದ್ಯೋಗ ದೊರಕುತ್ತಿತ್ತು. 16 ಕೋಟಿ ಮಹಿಳೆಯರಿಗೆ ವರ್ಷಕ್ಕೆ ₹1 ಲಕ್ಷ ನೀಡಿ ಅವರ ಕುಟುಂಬಗಳ ಬದುಕನ್ನೇ ಬದಲಾಯಿಸಬಹುದಿತ್ತು. 10 ಕೋಟಿ ರೈತ ಕುಟುಂಬಗಳ ಸಾಲ ಮನ್ನಾ ಮಾಡಿ ಅಸಂಖ್ಯಾತ ಆತ್ಮಹತ್ಯೆಗಳನ್ನು ತಡೆಯಬಹುದಿತ್ತು. ಇಡೀ ದೇಶಕ್ಕೆ 20 ವರ್ಷಗಳ ಕಾಲ ಕೇವಲ ₹400ಕ್ಕೆ ಗ್ಯಾಸ್ ಸಿಲಿಂಡರ್ ನೀಡಬಹುದಿತ್ತು. ಭಾರತೀಯ ಸೇನೆಯ ಸಂಪೂರ್ಣ ವೆಚ್ಚವನ್ನು ಮೂರು ವರ್ಷಗಳವರೆಗೆ ಭರಿಸಬಹುದಿತ್ತು. ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗದವರಿಗೆ ಪದವಿವರೆಗೆ ಉಚಿತ ಶಿಕ್ಷಣ ನೀಡಬಹುದಿತ್ತು' ನರೇಂದ್ರ ಮೋದಿಯವರ ಈ ಅಪರಾಧವನ್ನು ದೇಶ ಎಂದಿಗೂ ಕ್ಷಮಿಸುವುದಿಲ್ಲ ಎಂದಿರುವ ಅವರು ಈಗ ಪರಿಸ್ಥಿತಿ ಬದಲಾಗಲಿದೆ - ಪ್ರತಿಯೊಬ್ಬ ಭಾರತೀಯನ ಪ್ರಗತಿಗಾಗಿ ಕಾಂಗ್ರೆಸ್ ಸರ್ಕಾರ ನಡೆಸಲಿದೆ ಎಂದು ಬರೆದುಕೊಂಡಿದ್ದಾರೆ.

Next Article