ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿ ಆಳ್ವಿಕೆ ವಿರುದ್ಧ ಆರೋಪ ಪಟ್ಟಿ

11:59 PM Mar 18, 2024 IST | Samyukta Karnataka

ಬೆಂಗಳೂರು: ಲೋಕಸಭಾ ಚುನಾವಣೆ ೨೦೨೪ರ ಇದೇ ಸಂದರ್ಭದಲ್ಲಿ ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿಯನ್ನು ಜನಾಂದೋಲನಗಳ ಮಹಾಮೈತ್ರಿ, ಜನತಂತ್ರ ಪ್ರಯೋಗ ಶಾಲೆ ಹಾಗೂ ಇತರೆ ಸಂಘಟನೆಗಳ ಸಹಯೋಗದೊಂದಿಗೆ ಸೋಮವಾರ ಬಿಡುಗಡೆ ಮಾಡಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್, ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಹತ್ತು ವರ್ಷಗಳ ಆಡಳಿತ ನಡೆಸಿರುವ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ನಡೆಸಿರುವ ಎಲ್ಲಾ ರೀತಿಯ ದುರಾಡಳಿತವನ್ನು ಪಟ್ಟಿ ಮಾಡಿ ಮತದಾರರ ಮುಂದಿಡುವುದು ಸಾಮಾಜಿಕ ಹೊಣೆಗಾರಿಕೆಗೆ ಬದ್ಧವಾಗಿರುವ ಜನಾಂದೋಲನಗಳ ಮಹಾಮೈತ್ರಿಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಇದೇ ರೀತಿ ಹಿಂದೆ ರಾಜ್ಯದಲ್ಲಿದ್ದ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧವು ಮಹಾಮೈತ್ರಿಯು ಹಲವಾರು ಹೋರಾಟಗಳನ್ನು ಹಮ್ಮಿಕೊಂಡಿದ್ದೆವು, ಅದು ಅತ್ಯಂತ ಯಶಸ್ವಿಯಾಗಿರುವುದನ್ನು ನಾವು ಗಮನಿಸಿದ್ದೆವು. ಜನತಂತ್ರದ ಆಧಾರ ಸ್ತಂಭಗಳ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಸಾಂವಿಧಾನಿಕ ಸ್ವತಂತ್ರ ಸಂಸ್ಥೆಗಳನ್ನು ತಮ್ಮ ಕೀಳು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ. ಆರ್ಥಿಕ, ಸಾಮಾಜಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ರಾಜಕೀಯ ಲಾಭಗಳಿಕೆಗೆ ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಮೂಲ ಆಶಯಗಳಿಗೆ ತಿಲಾಂಜಲಿ ನೀಡಿದೆ. ಇದೀಗ ಸ್ಫೋಟಗೊಂಡ ಚುನಾವಣಾ ಬಾಂಡ್ ಹಗರಣವು ಕಾರ್ಪೊರೇಟ್ ಕಂಪನಿ ಮತ್ತು ರಾಜಕೀಯ ಪಕ್ಷಗಳ ಅಪವಿತ್ರ ಮೈತ್ರಿಯನ್ನು ಬಹಿರಂಗ ಪಡಿಸಿದೆ.
ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸತ್ಯಾಂಶವನ್ನು ಜನತೆಯ ಮುಂದಿರಿಸಿ ಅವರ ಅರಿವನ್ನು ವಿಸ್ತರಿಸಿ ಕೋಮುವಾದಿ, ಜನವಿರೋಧಿ ಮೋದಿ ಸರ್ಕಾರವನ್ನು ಸೋಲಿಸಬೇಕು ಮತ್ತು ಎಡ ಪ್ರಜಾಸತ್ತಾತ್ಮಕ, ಸಮಾಜಮುಖಿ ಪಕ್ಷ ಹಾಗೂ ಸಂಘಟನೆಗಳನ್ನು ಬಲಪಡಿಸಬೇಕು ಎಂಬುದು ಜನಾಂದೋಲನಗಳ ಮಹಾಮೈತ್ರಿ ಹಾಗೂ ಇತರೆ ಸಂಘಟನೆಗಳ ಕರೆಯಾಗಿದೆ ಎಂದು ತಿಳಿಸಿದರು. ಮೋದಿ ಆಳ್ವಿಕೆಯ ವಿರುದ್ಧ ಜನತಾ ಆರೋಪ ಪಟ್ಟಿಯ ತಿಳಿಸುತ್ತಾ, ರಾಜ್ಯದ ಪ್ರತಿಯೊಂದು ಮನೆಗೂ ತಲುಪಿಸುತ್ತೇವೆ ಎಂದರು. ಜನಾಂದೋಲನಗಳ ಮಹಾಮೈತ್ರಿಯ ಪ್ರಮುಖರಾದ ಮೈಕಲ್ ಫರ್ನಾಂಡಿಸ್, ಉಡುಪಿ ಅಕ್ಬರ್ ಅಲಿ, ಉಗ್ರ ನರಸಿಂಹೇಗೌಡ, ಡಾ.ಟಿ.ಆರ್.ಚಂದ್ರಶೇಖರ್, ಕೆ.ವಿ.ಭಟ್, ಗೋಪಾಲ್ ಹಾಗೂ ಇತರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Next Article