ಮೋದಿ ಕಾಣಲು ಹರಿದು ಬಂದ ಜನಸಾಗರ
ಬಾಗಲಕೋಟೆ:ನಗರದಲ್ಲಿ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಅವರ ವಿಜಯಸಂಕಲ್ಪ ಸಮಾವೇಶಕ್ಕೆ ಜನಸಾಗರ ಹರಿದು ಬಂದಿದೆ.
ನವನಗರದ ತೋಟಗಾರಿಕೆ ವಿಶ್ವವಿದ್ಯಾಲಯದ ಬಳಿ ಹಾಕಲಾಗಿರುವ ಬೃಹತ್ ಶಾಮಿಯಾನದಲ್ಲಿ ಅಂದಾಜು ೮೦ ಸಾವಿರ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಸಚಿವರಾದ ಸಿ.ಸಿ, ಪಾಟೀಲ, ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಶಾಸಕರಾದ ಸಿದ್ದು ಸವದಿ, ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ ಸೇರಿ ಗಣ್ಯರು ಭಾಗಿ ಆಗಿದ್ದಾರೆ
ಮೋದಿ ಆಗಮನಕ್ಕೂ ಮುನ್ನ ವೇದಿಕೆಯಿಂದ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
೧೨ ಗಂಟೆಗೆ ಮೋದಿ ಅವರು ಆಗಮಿಸಲಿದ್ದು, ೩೫ ನಿಮಿಷಗಳ ಕಾಲ ಸಾರ್ವಜನರಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.