ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

`ಮೋದಿ ಸೋಲಿಸಲು ಶತ್ರು ರಾಷ್ಟ್ರಗಳ ಬೆಂಬಲ'

09:49 PM Apr 08, 2024 IST | Samyukta Karnataka

ಮೂಡಲಗಿ: ವಿಶ್ವನಾಯಕ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಚೀನಾ, ಪಾಕಿಸ್ತಾನ ಸೇರಿದಂತೆ ಶತ್ರು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಆರೋಪಿಸಿದರು.
ತಾಲೂಕಿನ ನಾಗನೂರ ಪಟ್ಟಣದ ಮಹಾಲಿಂಗೇಶ್ವರ ಬಸವತೀರ್ಥ ಮಠದ ಆವರಣದಲ್ಲಿ ಜರುಗಿದ ಅರಭಾವಿ ವಿಧಾನಸಭಾ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ದೂರದೃಷ್ಟಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದೆ. ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ ರಾಷ್ಟ್ರಗಳು ಕುತಂತ್ರ ನಡೆಸುತ್ತಿವೆ ಎಂದರು.
ಈಗ ಇಡೀ ದೇಶವೇ ಮೋದಿಯವರ ಬೆನ್ನಿಗಿದೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಒಟ್ಟಾರೆ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿವೆ. ಕಾಂಗ್ರೆಸ್ ಪಕ್ಷ ದಿವಾಳಿಯತ್ತ ಸಾಗುತ್ತಿದ್ದು, ೩೦ ರಿಂದ ೩೫ ಸ್ಥಾನಗಳನ್ನು ಮಾತ್ರ ಪಡೆಯಲಿದೆ. ಹೀಗಾಗಿ ವಿರೋಧ ಪಕ್ಷವಾಗಲು ಸಹ ಅದು ತನ್ನ ಅರ್ಹತೆಯನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆ ಎಂದು ಶೆಟ್ಟರ್ ಭವಿಷ್ಯ ನುಡಿದರು.

Next Article